ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ನಡೆದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಕನಿಷ್ಠ 133 ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
242 ಪ್ರಯಾಣಿಕರನ್ನು ಹೊತ್ತ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಐದು ನಿಮಿಷಗಳ ನಂತರ ಅಪಘಾತಕ್ಕೀಡಾಯಿತು. ವಿಮಾನಯಾನ ಅಧಿಕಾರಿಗಳ ಪ್ರಕಾರ, ಅಪಘಾತಕ್ಕೆ ಕೆಲವೇ ಕ್ಷಣಗಳ ಮೊದಲು ಪೈಲಟ್‌ಗಳು ಅಹಮದಾಬಾದ್ ಎಟಿಸಿಗೆ ಮೇಡೇ ಕರೆ ನೀಡಿದ್ದರು ಎನ್ನಲಾಗಿದೆ.
ಇನ್ನು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಲಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.