ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿಗಣತಿ ಮರು ಸಮೀಕ್ಷೆ ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ ಸೆಕ್ಷನ್ 11ರ ಪ್ರಕಾರ 10 ವರ್ಷವಾದ ಬಳಿಕ ಹೊಸ ಸಮೀಕ್ಷೆ ನಡೆಸಬೇಕು ಎಂದು ಹೇಳಿದೆ. ಹೈಕಮಾಂಡ್ ಕೂಡ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.