ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ: ನಾಳೆ ಬಿಜೆಪಿ ಕಾರ್ಯಕರ್ತರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.

ಮೈಸೂರಿನಲ್ಲಿಂದು ಮಾತನಾಡಿದ ಅವರು, ಮೂಡಾ, ವಾಲ್ಮೀಕಿ ನಿಗಮಗಳಲ್ಲಿ ಭಾರಿ ಭ್ರಷ್ಟಾಚಾರ ನಡೆಸುವ ಮೂಲಕ ಸರ್ಕಾರ ಹಲವು ಹಗರಣಗಳಲ್ಲಿ ಭಾಗಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ನೀರಾವರಿ ಯೋಜನೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು. ಆರ್ ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೆ 11 ಜನರ ಸಾವು ತಡೆಯಬಹುದಿತ್ತು ಎಂದರು.

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ವರ್ಷಗಳ ಕಾಲ ಅತ್ಯುತ್ತಮ ಆಡಳಿತ ನೀಡುತ್ತಿದ್ದು, ಅಭಿವೃದ್ಧಿಯ ಪರ್ವಕ್ಕೆ ಹೊಸ ಭಾಷ್ಯ ಬರೆದಿದ್ದಾರೆ. ದೇಶವನ್ನು ಆರ್ಥಿಕವಾಗಿ ಮುನ್ನಡೆಸುತ್ತಿದ್ದು, ವಿಶ್ವದ ಅತಿ ದೊಡ್ಡ 4ನೇ ಆರ್ಥಿಕ ರಾಷ್ಟ್ರವಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಜಿಡಿಪಿ ಏರಿಕೆ ಹಾಗೂ ಉದ್ಯೋಗ ಸೃಷ್ಟಿಯಲ್ಲೂ ಮುನ್ನಡೆ ಸಾಧಿಸಿದ್ದೇವೆ ಎಂದರು. ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರ ಮೆಚ್ಚುಗೆಗೆ ಪ್ರಧಾನಿ ಪಾತ್ರರಾಗಿದ್ದಾರೆ. ವಿಶೇಷವಾಗಿ ಭಯೋತ್ಪಾದನೆ ನಿರ್ಮೂಲನೆ ಮಾಡಲು ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!