ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ಅಹಮದಾಬಾದ್ನ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ವಿಮಾನ ಪತನಗೊಂಡ ಸ್ಥಳಕ್ಕೆ ಮೋದಿ ಭೇಟಿ ನೀಡಲಿದ್ದು, ಅಧಿಕಾರಿಗಳಿಂದ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ, ಬದುಕುಳಿದ ಏಕೈಕ ಪ್ರಯಾಣಿಕನ ಆರೋಗ್ಯ ವಿಚಾರಿಸಲಿದ್ದಾರೆ. ನಿನ್ನೆಯೂ ಅವಘಡದ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿ, ವಿಮಾನ ಅಪಘಾತದ ಕುರಿತು ಮಾಹಿತಿ ಪಡೆದಿದ್ದರು.