ಹೊಸದಿಗಂತ ಡಿಜಿಟಲ್ ಡೆಸ್ಕ್:
ವುಮೆನ್ಸ್ ಪ್ರೀಮಿಯರ್ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿದ ಡೆಲ್ಲಿ, ಟೂರ್ನಿಯ ಇತಿಹಾಸದಲ್ಲೇ ಸತತವಾಗಿ ಫೈನಲ್ ತಲುಪಿದ ಏಕೈಕ ತಂಡ ಎಂಬ ದಾಖಲೆ ಬರೆದಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗಸ್ ಮೊದಲು ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು.
169 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರ್ತಿ ಲಿಝಿಲ್ ಲೀ (43) ಮತ್ತು ಶಫಾಲಿ ವರ್ಮಾ (31) ಉತ್ತಮ ಅಡಿಪಾಯ ಹಾಕಿಕೊಟ್ಟರು. ನಂತರ ನಾಯಕಿ ಜೆಮಿಮಾ ರೊಡ್ರಿಗಸ್ (41) ಜವಾಬ್ದಾರಿಯುತ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇದನ್ನೂ ಓದಿ:
ಡೆಲ್ಲಿ ಕೇವಲ 15.4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 169 ರನ್ ಗಳಿಸುವ ಮೂಲಕ ಭರ್ಜರಿ ಜಯ ಸಾಧಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡವು WPL ಇತಿಹಾಸದಲ್ಲಿ ಅಳಿಸಲಾಗದ ದಾಖಲೆ ಬರೆದಿದೆ. 2023, 2024 ಮತ್ತು 2025 ರ ಸೀಸನ್‌ಗಳಲ್ಲಿ ಫೈನಲ್ ತಲುಪಿದ್ದ ಡೆಲ್ಲಿ, ಇದೀಗ ನಾಲ್ಕನೇ ಸೀಸನ್‌ನಲ್ಲೂ ಫೈನಲ್‌ಗೆ ಪ್ರವೇಶಿಸಿದೆ. ಈ ಹಿಂದಿನ ಮೂರೂ ಬಾರಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದ್ದ ಜೆಮಿಮಾ ಪಡೆ, ಈ ಬಾರಿಯಾದರೂ ಆ ಕನಸಿನ ಟ್ರೋಫಿಯನ್ನು ಎತ್ತಿ ಹಿಡಿಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.



