ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದು ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಿದೆ.
ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ.
ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್ ಆಫ್ ಔಟ್ ಅಂಕ ಬಂದಿದೆ. ಕರ್ನಾಟಕದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ಎಸ್ಎಸ್ಎಲ್ ಪರೀಕ್ಷೆ-2 ನಡೆದಿತ್ತು.
ರಿಸಲ್ಟ್ ಹೀಗೆ ನೋಡಿ..
karresults.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಮುಖಪುಟದಲ್ಲಿ, KSEAB 10ನೇ SSLC ಪರೀಕ್ಷೆಯ 2 ನೇ ಫಲಿತಾಂಶಗಳು 2025 ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಸಬ್ಮೀಟ್ ಮಾಡಿ.
ಬಳಿಕ ಪರದೆಯ ಮೇಲೆ ನಿಮ್ಮ ಫಲಿತಾಂಶ ಕಾಣಿಸಿಕೊಳ್ಳುತ್ತದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಮೇ 24ರಂದು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಶೇ.62.34ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರು.