ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನ ಅಪಘಾತಕ್ಕೂ ಮುನ್ನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗುವ ಮುನ್ನ ಇದೇ ವಿಮಾನವು ಪ್ಯಾರಿಸ್‌ನಿಂದ ದೆಹಲಿಗೆ ಹಾಗೂ ದೆಹಲಿಯಿಂದ ಅಹಮದಾಬಾದ್‌ಗೆ ಯಾವುದೇ ಸಮಸ್ಯೆಗಳಿಲ್ಲದೆ ಹಾರಾಟ ನಡೆಸಿತ್ತು ಎಂದು ತಿಳಿಸಿದ್ದಾರೆ.
ಇದೇ ವೇಳೆ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಮಾತನಾಡಿ, ಸದ್ಯ ಬ್ಲ್ಯಾಕ್‌ಬಾಕ್ಸ್‌ನ್ನು ಡಿಕೋಡ್ ಮಾಡಲಾಗುತ್ತಿದ್ದು, ದುರಂತಕ್ಕೂ ಮುನ್ನ ವಿಮಾನದಲ್ಲಿ ಆಗಿದ್ದಾದರೂ ಏನು ಎನ್ನುವ ಮಾಹಿತಿ ತಿಳಿದುಬರಲಿದೆ ಎಂದು ಹೇಳಿದ್ದಾರೆ.