ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ. ಈಗಲೂ ಮೀಸಲಾತಿ-ಜಾತಿ ಗಣತಿ ಎನ್ನುತ್ತ ರಾಜಕೀಯ ಪ್ರಹಸನ ಮಾಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮೀಸಲಾತಿ ವಿಚಾರದಲ್ಲಿ ಜನರ ಕಣ್ಣಿಗೆ ಮಣ್ಣೆರೆಚಲು ನೋಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಲು ಜಾತಿ ಗಣತಿ ವಿಷಯ ಹರಿಬಿಡುತ್ತಿದ್ದಾರೆ ಎಂದು ಟೀಕಿಸಿದರು.
ವಿಮಾನ ದುರಂತ ದುರದೃಷ್ಟಕರ ಅವಘಡ. ಈ ದುರ್ಘಟನೆಯಲ್ಲಿ ಅನೇಕರ ಸಾವು ಸಂಭವಿಸಿರುವುದು ತೀವ್ರ ದುಃಖ ತರಿಸಿದೆ. ವಿಮಾನ ದುರಂತ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಡಿಜಿಸಿಎ ಸಮಗ್ರ ತನಿಖೆ ನಡೆಸಲಿದೆ. ಭವಿಷ್ಯದಲ್ಲಿ ಇಂಥ ಅವಘಡಗಳು ಘಟಿಸದಂತೆ ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.