ಹೊಸದಿಗಂತ ಡಿಜಿಟಲ್ ಡೆಸ್ಕ್:
ವರದಕ್ಷಿಣೆಗಾಗಿ ಮಹಿಳೆಯ ಮೇಲೆ ಪತಿ, ಅತ್ತೆ ಮತ್ತು ಮಾವ ಸೇರಿ ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ಸಂಗೀತಾ ಎಂದು ಗುರುತಿಸಲಾಗಿದೆ. ಮಹಿಳೆಗೆ ಮದುವೆಯಾಗಿ 10 ವರ್ಷಗಳಾಗಿತ್ತು. ಮದುವೆಯಾದ ಬಳಿಕ ಒಂದು ವರ್ಷ ಚೆನ್ನಾಗಿದ್ದರು. ನಂತರ ಪತಿ ಕುಟುಂಬ ವರದಕ್ಷಿಣೆ ಕಿರುಕುಳ ನೀಡುತ್ತಿತ್ತು ಎಂದು ತಿಳಿದುಬಂದಿದೆ. ವರದಕ್ಷಿಣೆ ಕೊಡದ ಕಾರಣ ಪತಿ ಮತ್ತು ಅತ್ತೆ-ಮಾವ ಸೇರಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.
ಮಹಿಳೆಯ ಜನನಾಂಗ ಸೇರಿದಂತೆ ದೇಹದ ಮೇಲೆಲ್ಲ ಬಿಸಿ ಕಬ್ಬಿಣದಿಂದ ಬರೆ ಹಾಕಿದ್ದಾರೆ. ಇದರಿಂದ ಮಹಿಳೆ ಸಾವನ್ನಪ್ಪಿದ್ದು, ಮಹಿಳೆಯ ತಾಯಿ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಕುಟುಂಬದ ಐವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.