ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿನದಿಂದ ದಿನಕ್ಕೆ ಭಾರೀ ಮಳೆಯಾಗುತ್ತಿದ್ದು ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ ಕಂಡಿದೆ. ಇನ್ನು ಈ ಪರಿಣಾಮದಿಂದಾಗಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
ಕಳೆದ ಎರಡು ದಿನದಿಂದ ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766 (ಇ) ನಲ್ಲಿ ಗುಡ್ಡ ಕುಸಿತವಾಗುತಿತ್ತು. ಕುಸಿದ ಗುಡ್ಡದ ಮಣ್ಣು ತೆಗೆದು ಶನಿವಾರ ರಾತ್ರಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಇಂದು ಮತ್ತೆ ಕುಸಿದ ಜಾಗದಲ್ಲೇ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆ ಕಲ್ಲು, ಮರಗಳು ಉರುಳಿ ಬಿದ್ದಿವೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗಿನಿಂದ ಕುಮಟಾ-ಶಿರಸಿಯ ಹೆದ್ದಾರಿ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು ದುರಸ್ತಿ ಕಾರ್ಯಗಳು ಸರಿಯಾದ ನಂತರವಷ್ಟೇ ಮತ್ತೆ ಸಂಚಾರಕ್ಕೆ ಮುಕ್ತವಾಗಲಿದೆ.