ಸಕಲೇಶಪುರ: ವಿದ್ಯುತ್ ತಂತಿ ತುಳಿದು ತಾಯಿ, ಮರಿ ಆನೆ ದಾರುಣ ಸಾವು

ಹೊಸದಿಗಂತ ಹಾಸನ :

ತಾಲೂಕಿನ ಗುಡ್ಡೆಬೆಟ್ಟಗ್ರಾಮದ ಬಳಿಯ ಎಬಿಸಿ ಎಸ್ಟೇಟ್‌ನಲ್ಲಿ ಶನಿವಾರ ರಾತ್ರಿ ಎರಡು ಕಾಡಾನೆಗಳು ವಿದ್ಯುತ್ ಶಾಕ್‌ಗೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ.

ತಾಯಿ ಆನೆಯೊಂದಿಗೆ ಸಂಚರಿಸುತ್ತಿದ್ದ ಮರಿಯಾನೆ ತಾಯಿಯೊಂದಿಗೆ ತಾನೂ ಪ್ರಾಣ ಕಳೆದುಕೊಂಡು ಬಿದ್ದಿದೆ.

ಗಾಳಿ-ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಕಾರಣ ಈ ದುರಂತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಆಹಾರ ಅರಸಿ ಕಾಫಿ ತೋಟದೊಳಗೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!