ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದ ಭಾರೀ ಗಾಳಿ ಸಹಿತ ಮಳೆಯಾಗುತಿದೆ. ಹೆಚ್ಚಿನ ಮಳೆಯಿಂದ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭೂ ಕುಸಿತ ಉಂಟಾಗಿದೆ.
ಅಪಾರ ಪ್ರಮಾಣದ ಕಲ್ಲು ಮಣ್ಣು ರಸ್ತೆಗೆ ಕುಸಿದು ಬಿದ್ದಿದರಿಂದ ಕೆಲ ಕಾಲ ಶೃಂಗೇರಿ – ಮಂಗಳೂರು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಣ್ಣು ಕಲ್ಲುಗಳನ್ನು ರಸ್ತೆಯಿಂದ ತೆರವುಗೊಳಿಸಲಾಗಿದೆಯಾದರೂ ಈ ರಸ್ತೆಯ ಹಲವೆಡೆ ಮಣ್ಣು ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಬದಲಿ ಮಾರ್ಗಗಳಲ್ಲಿ ತೆರಳಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ದತ್ತಪೀಠ ಭಾಗಗಳಲ್ಲಿ ನಿರಂತರ ಗಾಳಿ ಮಳೆಯಾಗುತ್ತಿದೆ. ಇಂದು ಮಳೆಯಿಂದ ರಸ್ತೆ ಕಾಣದೆ ಮುಳ್ಳಯ್ಯನಗಿರಿಗೆ ತೆರಳುವ ಕವಿಕಲ್ ಗಂಡಿ ಬಳಿ ಪ್ರವಾಸಿಗರ ಕಾರೊಂದು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ಐವರು ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.