ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ. ಈ ಮಹತ್ವದ ವಿದ್ಯಮಾನದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುತ್ತಿರುವುದು ವಿಶೇಷ ಕುತೂಹಲ ಕೆರಳಿಸಿದೆ.
ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್ ಮಾಹಿತಿ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಲಿದೆ. ಮಮತಾ ಬ್ಯಾನರ್ಜಿ ಅವರೊಂದಿಗೆ ತೃಣಮೂಲ ಕಾಂಗ್ರೆಸ್ ಸಂಸದರಾದ ಡೆರೆಕ್ ಒ’ಬ್ರೇನ್, ಡೋಲಾ ಸೇನ್ ಮತ್ತು ಮೋಸ್ತಾರಿ ಬಾನೋ ಅವರು ಸಲ್ಲಿಸಿರುವ ಅರ್ಜಿಗಳೂ ವಿಚಾರಣೆಗೆ ಬರಲಿವೆ.
ಇದನ್ನೂ ಓದಿ:
ಕೋಲ್ಕತ್ತಾದ ಜೋಗೇಶ್ ಚಂದ್ರ ಚೌಧರಿ ಕಾಲೇಜಿನಿಂದ ಎಲ್‌ಎಲ್‌ಬಿ ಪದವಿ ಪಡೆದಿರುವ ಮಮತಾ ಬ್ಯಾನರ್ಜಿ ಅವರು ವಕೀಲರಾಗಿಯೂ ಅನುಭವ ಹೊಂದಿದ್ದಾರೆ (2003ರವರೆಗೆ ವೃತ್ತಿನಿರತರಾಗಿದ್ದರು). ಹೀಗಾಗಿ, ಹಿರಿಯ ವಕೀಲ ಶ್ಯಾಮ್ ದಿವಾನ್ ಅವರೊಂದಿಗೆ ಮಮತಾ ಬ್ಯಾನರ್ಜಿ ಅವರೂ ಸಹ ನ್ಯಾಯಾಲಯದ ಮುಂದೆ ಖುದ್ದು ವಾದ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.



