ಏರ್​ ಇಂಡಿಯಾ ವಿಮಾನ ದುರಂತ, ಕೊನೆಗೂ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಏರ್​​ಇಂಡಿಯಾ ವಿಮಾನದಲ್ಲಿದ್ದ ಎರಡು ಬ್ಲ್ಯಾಕ್ಸ್​ಬಾಕ್ಸ್​ಗಳ ಪೈಕಿ ಎರಡನೇ ಬ್ಲ್ಯಾಕ್​ಬಾಕ್ಸ್ ಕೂಡ​  ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಭಾನುವಾರ ಪತ್ತೆಯಾಗಿದೆ.

ಈ ಎರಡನೇ ಬ್ಲ್ಯಾಕ್‌ ಬಾಕ್ಸ್​ನಿಂದ ಘಟನೆಯ ಪ್ರತಿ ಸೆಕೆಂಡ್‌ನಲ್ಲಿ ಏನಾಗಿತ್ತು ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ಇದು ಕಾಕ್‌ಪಿಟ್‌ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ. ಎಲ್ಲಾ ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ. ವಿಶ್ವದ ಅತ್ಯಂತ ಸುರಕ್ಷಿತ ಪ್ರಯಾಣಿಕ ವಿಮಾನಗಳಲ್ಲಿ ಒಂದಾದ ಬೋಯಿಂಗ್ 787 ಡ್ರೀಮ್​​ಲೈನ್ರ್ ವಿಮಾನ ನೆಲಕ್ಕೆ ಅಪ್ಪಳಿಸಿತ್ತು.

ಅಹಮದಾಬಾದ್‌ನಲ್ಲಿ ನಡೆದ ಭೀಕರ ವಿಮಾನ ಅಪಘಾತದ 28 ಗಂಟೆಗಳ ಒಳಗೆ ಏರ್ ಇಂಡಿಯಾ ವಿಮಾನ AI-171 ರ ಮೊದಲ ಬ್ಲ್ಯಾಕ್​​ಬಾಕ್ಸ್​ ವಶಪಡಿಸಿಕೊಳ್ಳಲಾಗಿದೆ. ಅಪಘಾತದ ಸಮಯದಲ್ಲಿ ವಿಮಾನ ಡಿಕ್ಕಿ ಹೊಡೆದ ಅಪಘಾತ ಸ್ಥಳದಲ್ಲಿರುವ ಕಟ್ಟಡದ ಛಾವಣಿಯಲ್ಲಿ ಈ ಬ್ಲ್ಯಾಕ್​​ಬಾಕ್ಸ್​ ಸಿಕ್ಕಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!