September 30, 2026
Wednesday, September 30, 2026
spot_img

ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ: ಕೇರಳದ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐತಿಹಾಸಿಕ ನಗರಿ ಹಂಪಿಯ ಸೌಂದರ್ಯ ಸವಿಯಲು ಕೇರಳದಿಂದ ಬರುತ್ತಿದ್ದ ವಿದ್ಯಾರ್ಥಿಗಳ ಪ್ರವಾಸ ಅರ್ಧಕ್ಕೇ ಮೊಟಕುಗೊಂಡಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ರಸ್ತೆಯ ಡಿವೈಡರ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಸದ್ಯ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Must Read