ಪ್ರವಾಸಿಗರೇ ಗಮನಿಸಿ, ಇಂದಿನಿಂದ 3 ದಿನಗಳ ಕಾಲ ನಂದಿಗಿರಿಧಾಮಕ್ಕೆ ಎಂಟ್ರಿ ಇಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಜೂ.19ರಂದು ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ  ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.

ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!