ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರಿಗೆ ಸೈಪ್ರಸ್ ದೇಶದ ಅತ್ಯುನ್ನತ ಪ್ರಶಸ್ತಿ ಗ್ರ‍್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ನೀಡಿ ಗೌರವಿಸಲಾಗಿದೆ.
ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿ ಅವರಿಗೆ ಸೈಪ್ರಸ್‌ನ ಅತ್ಯುನ್ನತ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಸೈಪ್ರಸ್ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಇದು ನರೇಂದ್ರ ಮೋದಿಗೆ ಮಾತ್ರವಲ್ಲ, 140 ಕೋಟಿ ಭಾರತೀಯರಿಗೂ ಸಂದ ಗೌರವವಿದು. ಇದು ಅವರ ಸಾಮರ್ಥ್ಯ ಮತ್ತು ಆಕಾಂಕ್ಷೆಗಳಿಗೆ ಸಂದ ಗೌರವ. ಇದು ನಮ್ಮ ಸಂಸ್ಕೃತಿ, ಸಹೋದರತ್ವ ಮತ್ತು ವಸುಧೈವ ಕುಟುಂಬಕಂ ಎಂಬ ಸಿದ್ಧಾಂತಕ್ಕೆ ಸಂದ ಗೌರವ ಎಂದರು.