ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋನಿಪತ್ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರ್ಯಾಣ ಮೂಲದ ಮಾಡೆಲ್‌ನ ಶವ ಪತ್ತೆಯಾಗಿದೆ. ಹರಿಯಾಣವಿ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್ ಶವ ಪತ್ತೆಯಾಗಿದ್ದು ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಜೂನ್ 14 ರಂದು ಮಾಡೆಲ್ ಶೂಟಿಂಗ್‌ಗಾಗಿ ಅಹರ್ ಗ್ರಾಮಕ್ಕೆ ತೆರಳಿದ್ದರು. ಮರಳಿ ಮನೆಗೆ ಬಾರದೇ ಇದ್ದಾಗ ಸಹೋದರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ತನಿಖೆ ಶುರು ಮಾಡಿದ ಪೊಲೀಸರಿಗೆ ಖಾಂಡಾ ಗ್ರಾಮದ ಬಳಿಯ ಕಾಲುವೆಯಲ್ಲಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.