ಕಾಂತಾರ ಚಿತ್ರತಂಡಕ್ಕೆ ಹೊಸನಗರ ತಹಶೀಲ್ದಾರ್ ನೋಟಿಸ್.. ತಪ್ಪದ ಸಂಕಷ್ಟದ ಸಂಕೋಲೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್​ 1’ ಚಿತ್ರತಂಡಕ್ಕೆ ಮತ್ತೊಂದು ಕಂಟಕ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ‘ಕಾಂತಾರ’ ಚಿತ್ರತಂಡಕ್ಕೆ ನೋಟಿಸ್ ನೀಡಿದ್ದಾರೆ.

ಇತ್ತೀಚೆಗೆ ಚಿತ್ರೀಕರಣದ ವೇಳೆ ಮಾಣಿ ಡ್ಯಾಮ್​​​ ಹಿನ್ನೀರಿನಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದ್ದರ ಬಗ್ಗೆ ವರದಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡುವಂತೆ ಕಾಂತಾರ ಚಿತ್ರತಂಡಕ್ಕೆ ನೋಟಿಸ್​ ನೀಡಲಾಗಿದೆ.

ಶೂಟಿಂಗ್​ಗೆ ಪಡೆದ ಅನುಮತಿ ಪತ್ರ ಹಾಜರುಪಡಿಸಲು ಸೂಚಿಸಲಾಗಿದೆ. ನೋಟಿಸ್​ ತಲುಪಿದ 3 ದಿನದೊಳಗೆ ಹಾಜರುಪಡಿಸಲು ಸೂಚನೆ ನೀಡಲಾಗಿದ್ದು, ಇಲ್ಲದಿದ್ದರೆ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!