ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದೇ ತಿಂಗಳ 19 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಿಸರ್ಗ ರಮಣೀಯ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಆ ದಿನದಂದು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ಮತ್ತು ಹಿರಿಯ ಅಧಿಕಾರಿಗಳು ನಂದಿಗಿರಿಧಾಮಕ್ಕೆ ಭೇಟಿ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ನಂದಿ ಗಿರಿಧಾಮದ ತಪ್ಪಲಿನಲ್ಲಿರುವ ನಂದಿ ಗ್ರಾಮದ ಇತಿಹಾಸ ಪ್ರಸಿದ್ಧ ಭೋಗ ನಂದೀಶ್ವರ ದೇವಾಲಯಕ್ಕೆ ಜೂನ್ 19 ರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.