February 4, 2026
Wednesday, February 4, 2026
spot_img

ರೈತರ ಜೀವ ರಕ್ಷಣೆಗೆ HDK ದೆಹಲಿ ದೌಡು: ಕಾಡಾನೆ ಉಪಟಳಕ್ಕೆ ಸಿಗಲಿದೆಯೇ ಶಾಶ್ವತ ಮುಕ್ತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಮಲೆನಾಡು ಮತ್ತು ಬಯಲು ಸೀಮೆಯ ಜಿಲ್ಲೆಗಳಲ್ಲಿ ಆನೆಗಳ ದಾಳಿಯಿಂದ ಜನಸಾಮಾನ್ಯರು ಎದುರಿಸುತ್ತಿರುವ ಭೀತಿಯನ್ನು ಹೋಗಲಾಡಿಸಲು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ.

ಸಂಸತ್ ಭವನದಲ್ಲಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ ಹೆಚ್‌ಡಿಕೆ, ರಾಜ್ಯದ ರೈತರ ಜೀವಹಾನಿ ಮತ್ತು ಕೃಷಿ ನಾಶದ ಬಗ್ಗೆ ಕಳಕಳಿ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಕೊಡಗು, ಹಾಸನ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳ ಪರಿಸ್ಥಿತಿಯನ್ನು ವಿವರಿಸಿದ ಅವರು, ವನ್ಯಜೀವಿ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಭೂಪೇಂದ್ರ ಯಾದವ್ ಅವರು, ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದೇ ವೇಳೆ ಉಕ್ಕು ಉದ್ಯಮ ಮತ್ತು ಪರಿಸರ ಇಲಾಖೆಯ ನಡುವಿನ ಸಮನ್ವಯತೆಯ ಬಗ್ಗೆಯೂ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !