ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ವಿಭಾಗೀಯ ಪೀಠ ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ಇಂದು ನಡೆಸಿತು. ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಕೆ ಮಾಡಿತು.
ಹೈಕೋರ್ಟ್ ಸರ್ಕಾರದ ವಾದ ಕೇಳಿದ ಬಳಿಕ ಮುಚ್ಚಿದ ಲಕೋಟೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿದೆ.