ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರಕಾರ ಕೂಡಲೇ ಪ್ರತಿಟನ್‌ಗೆ 15 ಸಾವಿರ ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಇಂದಿನಿಂದಲೇ ಹೋರಾಟ ನಡೆಸಲಾಗುವುದು ಎಂದು ಮಾವು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನಪ್ರತಿನಿಧಿಗಳು ಮಾವು ಬೆಳೆಗಾರರ ಸಮಸ್ಯೆಗೆ ಆಸಕ್ತಿ ತೋರಿಲ್ಲ ಎಂದು ದೂರಿದ್ದಾರೆ. ಆಂಧ್ರ ಪ್ರದೇಶದಲ್ಲಿ ತಕ್ಷಣ ಬೆಂಬಲ ಬೆಲೆ ಘೋಷಣೆಯಾಗಿದೆ. ಕೂಡಲೇ ಆಂಧ್ರ ಪ್ರದೇಶ ಸರಕಾರದ ಮಾದರಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆಯನ್ನು ಘೋಷಿಸುವ ಮೂಲಕ ರಾಜ್ಯ ಸರಕಾರ ರೈತರ ಪರವಾಗಿ ನಿಲ್ಲಬೇಕೆಂದು ಆಗ್ರಹಿಸಿದ್ದಾರೆ.