ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯನಗರ ಜಿಲ್ಲೆಯು ವಿಶ್ವವಿಖ್ಯಾತ ಹಂಪಿ ಸೇರಿದಂತೆ ಹಲವಾರು ಪ್ರವಾಸಿ ತಾಣಗಳನ್ನು ಹೊಂದಿರುವುದರಿಂದ ಮೇಲ್ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಹಲವಾರು ರಸ್ತೆ ಕಾಮಗಾರಿಗಳು ನಿಧಾನ ಗತಿಯಲ್ಲಿ ಸಾಗಿದ್ದು, ಅಧಿಕಾರಿಗಳು ಎರಡು ತಿಂಗಳಿಗೊಮ್ಮೆ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಹೆದ್ದಾರಿ, ಸೇತುವೆ ಮತ್ತು ಮೇಲ್ ಸೇತುವೆಗಳ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.