ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಅಕ್ರಮ: ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರ ಡಿ.ಎಸ್.ಶಿಂಧೆ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ, ಪರೀಕ್ಷಾ ವಿಭಾಗದಲ್ಲಿ ಜರುಗಿದ ಅಕ್ರಮಗಳ ಬಗ್ಗೆ ತನಿಖೆ ಮಾಡಲು ಬೆಳಗಾವಿಯ ನಿವೃತ್ತ ಜಿಲ್ಲಾ ನ್ಯಾಯಾಧೀಶರ ಡಿ.ಎಸ್. ಶಿಂಧೆ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ ಪ್ರಕರಣ, ಹಾಗೂ ಕೆಲ ಕಾನೂನುಬಾಹಿರ ಆದೇಶಗಳ ಕುರಿತಂತೆ ಕುಲಾಧಿಪತಿಗಳ ಕಛೇರಿಯಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ದೂರಿನ ಪ್ರಕರಣಗಳ ಕುರಿತಂತೆ ವಿಚಾರಣೆ ನಡೆಸಲು ತನಿಖಾಧಿಕಾರಿಯನ್ನು ನೇಮಿಸಿ ಆದೇಶ ಜಾರಿಗೊಳಿಸಲಾಗಿದೆ. ೪೫ ದಿನಗಳ ಒಳಗಾಗಿ ತನಿಖೆ ಕೈಗೊಂಡು ವಿಶ್ವವಿದ್ಯಾಲಯಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ತನಿಖಾ ವರದಿಗಳು ವಿಶ್ವವಿದ್ಯಾಲಯಕ್ಕೆ ಸಲ್ಲಿಕೆಯಾದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದೆಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!