ಕಾಂಗ್ರೆಸ್ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಪ್ಪಾಣಿ ಕ್ಷೇತ್ರದ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಬುಧವಾರ ನಿಧನರಾಗಿದ್ದಾರೆ.

ಬೆಳಗಾವಿಯ ಕೆಎಲ್​ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಕಾ ಸಾಹೇಬ್ ಪಾಟೀಲ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

70 ವರ್ಷದ ಕಾಕಾ ಸಾಹೇಬ್ ಪಾಟೀಲ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ರಾಜ್ಯ ಕಾಂಗ್ರೆಸ್​ನ ಹಿರಿಯ ರಾಜಕಾರಣಿ ಕಾಕಾ ಸಾಹೇಬ್ ಪಾಟೀಲ್ ನಿಧನ ಸುದ್ದಿ ಕೇಳಿ ಕಾರ್ಯಕರ್ತರು ಆಘಾತಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಹಲವು ಗಣ್ಯರು, ಅವರ ರಾಜಕೀಯ ಮಿತ್ರರು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!