ಕನ್ನಡಿಗರ ಕೋಪಕ್ಕೆ ಕರಗದವರುಂಟೆ?? ಮೆಟ್ರೋ ನಿಲ್ದಾಣದಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಬಿಎಂಆರ್ ಸಿಎಲ್ ಗೆ ಅರ್ಜಿ ಹಾಕಲು ಕೆಎಂಎಫ್ ಗೆ ಸೂಚನೆ ನೀಡಿದ್ದು, 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಬಿಎಂಆರ್ ಸಿಎಲ್ ಅವರು ಟೆಂಡರ್ ಕರೆದಿದ್ದು, ಅಮೂಲ್ ಹೊರತಾಗಿ ಬೇರೆ ಯಾರೂ ಮಳಿಗೆಗಳಿಗೆ ಅರ್ಜಿ ಹಾಕಿಲ್ಲ. ಕೆಎಂಎಫ್ ಕೂಡ ಅರ್ಜಿ ಹಾಕಿರಲಿಲ್ಲ. ಈಗ ಕೆಎಂಎಫ್ ನವರಿಗೆ ನಾವು ಅರ್ಜಿ ಹಾಕುವಂತೆ ಸೂಚಿಸಿದ್ದು, ಟೆಂಡರ್ ಕರೆಯಲಾಗಿದ್ದ 10 ಕಡೆಗಳ ಪೈಕಿ ಎರಡು ಕಡೆ ಅಮೂಲ್ ಅವರು ಜಾಗತಿಕ ಟೆಂಡರ್ ನಲ್ಲಿ ಅರ್ಜಿ ಹಾಕಿ ಮಳಿಗೆ ತೆರೆದಿದ್ದಾರೆ. ತೆರೆಯಲಾಗಿರುವ ಮಳಿಗೆ ಮುಚ್ಚಿಸುವುದು ಸರಿಯಲ್ಲ. ಉಳಿದ 8 ಸ್ಥಳಗಳಲ್ಲಿ ಕೆಎಂಎಫ್ ಮಳಿಗೆಗೆ ಅವಕಾಶ ನೀಡಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ಮೆಟ್ರೋ ಸ್ಟೇಷನ್‌ಗಳಲ್ಲಿ ನಂದಿನಿ ಬದಲು ಬರೀ ಅಮುಲ್‌ ಮಳಿಗೆಗಳು ಆರಂಭವಾಗುವ ಸುದ್ದಿ ಹರಿದಾಡಿದ ನಂತರ ಕನ್ನಡಿಗರು ಗರಂ ಆಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!