ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೇವಿಲ್ ಚಿತ್ರೀಕರಣ ಮುಕ್ತಾಯದ ಬಳಿಕ ದೇವರ ಅನುಗ್ರಹ ಪಡೆಯಲು ನಟ ದರ್ಶನ್ ಇಂದು ಕುಟುಂಬ ಸಮೇತರಾ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಕೇರಳದ ಕೊಣ್ಣುರು ಮೀಪದಲ್ಲಿರುವ ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಭೇಟಿ ನೀಡಿದ್ದಾರೆ. ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
ಕೇರಳದ ಕೊಟ್ಟಿಯೂರು ಶಿವ ದೇವಾಲಯವು ಭಾರತದ ಅತ್ಯಂತ ಪ್ರಾಚೀನ ಮತ್ತು ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿವರ್ಷವೂ ವೈಶಾಖ ಮಾಹೋತ್ಸವದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ. ಈ ದೇವಸ್ಥಾನವು ದಕ್ಷಿಣ ಕಾಶಿ ಎಂದು ಕರೆಯಲ್ಪಡುವುದರಿಂದ ಅದರ ಧಾರ್ಮಿಕ ಮಹತ್ವವು ಅಪಾರವಾಗಿದೆ.