ಹೊಸದಿಗಂತ ದಾವಣಗೆರೆ:
ರಸ್ತೆ ದಾಟುವಾಗ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ತಾಲೂಕಿನ ಹೆಚ್.ಕಲಪನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-೪೮ರಲ್ಲಿ ನಡೆದಿದೆ.
ಗ್ರಾಮದ ರೈತ ಶೇಷಣ್ಣ(60 ವರ್ಷ) ಮೃತ ವ್ಯಕ್ತಿ. ಎಂದಿನಂತೆ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗಲು ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತ ಮಾಡಿದ ಕಾರು ನಿಲ್ಲಿಸದೆ ಪರಾರಿಯಾಗಿದೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮ ಗ್ರಾಮದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಹೆಚ್.ಕಲಪನಹಳ್ಳಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತಿದ್ದವು.