ಯುದ್ಧ ಪೀಡಿತ ಇರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯುದ್ಧಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಬುಧವಾರ ತಡರಾತ್ರಿ ನವದೆಹಲಿಗೆ ಬಂದಿಳಿದಿದೆ.

ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ‘ಆಪರೇಷನ್ ಸಿಂಧು’ ಎಂದು ಹೆಸರಿಟ್ಟಿದ್ದು, ಕಾರ್ಯಾಚರಣೆ ಮೂಲಕ ಭಾರತೀಯರನ್ನು ಸ್ಥಳಾಂತರಿಸಲಾಗುತ್ತಿದೆ.

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಈ ಪೈಕಿ 110 ಮಂದಿ ಇರಾನ್ ಗಡಿ ದಾಟಿ ನೆರೆಯ ಅರ್ಮೇನಿಯಾ ದೇಶಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳನ್ನು ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ನೆರವಿನೊಂದಿಗೆ ಸ್ವದೇಶಕ್ಕೆ ಕರೆಲಾಗಿದೆ.

ಇರಾನ್‌ ನಲ್ಲಿರುವ ಭಾರತೀಯರು ಟೆಹ್ರಾನ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ತುರ್ತು ಸಹಾಯವಾಣಿ ಸಂಪರ್ಕಿಸುವಂತೆ ಕೋರಿದೆ. ದೂರವಾಣಿ ಸಂಖ್ಯೆ: +989010144557, +989128109115; +989128109109.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!