ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಿನ ಉಪಹಾರ ಸೇವಿಸದೆ ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯೊಬ್ಬಳು ನಿತ್ರಾಣಗೊಂಡು ಶಾಲಾ ಕಟ್ಟಡದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದೆ.
ಮಲ್ಲೇಶ್ವರದ 13 ನೇ ಅಡ್ಡ ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಕೃತಿಕಾ ಉಪಾಹಾರ ಸೇವಿಸದೆ ಶಾಲೆಗೆ ಹೋಗಿದ್ದಳು. ಎರಡನೇ ಮಹಡಿಯ ಕಾರಿಡಾರ್ ಗೋಡೆಯ ಬಳಿ ಬಾಗಿ ನಿಂತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆಂದು ತಿಳಿದುಬಂದಿದೆ.
ಕೂಡಲೇ ಶಾಲಾ ಸಿಬ್ಬಂದಿ ವಿದ್ಯಾರ್ಥಿಯನ್ನು ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ಕೊಡಿಸಿದ್ದಾರೆ. ಬಾಲಕಿಗೆ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಾಯಗಳಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.