ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಯಶಸ್ಸನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸೂಕ್ತ ಕಾರಣಗಳನ್ನು ನೀಡುವಂತೆ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರವು ಅಮೆರಿಕ ಭೇಟಿಗೆ ನಿರಾಕರಿಸಿರುವುದು ತಮಗೆ ಮಾಡಿರುವ ಅನ್ಯಾಯವಾಗಿದೆ ಎಂದು ದೂರಿದ್ದಾರೆ. ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ವಿದೇಶಗಳಿಗೆ ಭೇಟಿ ನೀಡುತ್ತಿದ್ದು, ರಾಜ್ಯಕ್ಕೆ ಹೂಡಿಕೆಗಳ ಒಳ ಹರಿವು ಖಚಿತಪಡಿಸಿಕೊಳ್ಳುವುದು ತಮ್ಮ ಜವಾಬ್ದಾರಿಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.