ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಹೊಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 44, ಅತ್ತಿಬೆಲೆ ಬಳಿ ಇಂದು ಬೆಳಗ್ಗೆ ಭಾರೀ ಪ್ರಮಾಣದ ರಸ್ತೆ ಕುಸಿತ ಉಂಟಾಗಿದೆ.
ಬೆಳಗ್ಗೆ ಅತಿ ಹೆಚ್ಚು ವಾಹನಗಳು ಓಡಾಡುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಸದ್ಯ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಇದ್ದಕ್ಕಿದ್ದಂತೆಯೇ ರಸ್ತೆ ಕುಸಿತವಾಗಿದ್ದು, ವಾಹನ ಸವಾರರು ಶಾಕ್ ಆಗಿದ್ದಾರೆ. ಪೀಕ್ ಅವರ್ನಲ್ಲಿ ರಸ್ತೆ ಕುಸಿತವಾದ ಕಾರಣ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಪ್ರಸ್ತುತ ನಡೆಯುತ್ತಿರುವ ರಸ್ತೆ ವಿಸ್ತರಣೆ ಮತ್ತು ಎನ್ಎಚ್ಎಐ ಯೋಜನೆಗಳು ಈ ಘಟನೆಗೆ ಕಾರಣವಾಗಿದ್ದು, ಅಸ್ಥಿರವಾದ ಮಣ್ಣು ಮತ್ತು ಭಾರೀ ಯಂತ್ರೋಪಕರಣಗಳ ಸಂಚಾರದಿಂದ ರಸ್ತೆ ಕುಸಿತವಾಗಿದೆ ಎನ್ನಲಾಗುತ್ತಿದೆ.
ಈ ಘಟನೆಯಿಂದ ವಾಹನ ಸವಾರರು ಗರಂ ಆಗಿದ್ದಾರೆ. ರಸ್ತೆ ಹೀಗೆ ನಿರ್ಮಾಣ ಮಾಡಿದರೆ ಹೇಗೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.



