ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ ಕುರಿತು ಅಧ್ಯಯನ ನಡೆಸಲು ನೇಮಕ ಮಾಡಲಾಗಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸೀರ್ ಹುಸೇನ್ ನೇತೃತ್ವದ ಕೆಪಿಸಿಸಿ ಸತ್ಯಶೋಧನಾ ಸಮಿತಿಯು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗುರುವಾರ ಮಧ್ಯಂತರ ವರದಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ, ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಆರ್ ಸುದರ್ಶನ್, ಮಾಜಿ ಸಂಸದ ಜಯಪ್ರಕಾಶ್ ಹೆಗಡೆ ಅವರು ಉಪಸ್ಥಿತರಿದ್ದರು.