ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂ.19 ರಂದು ನಂದಿ ಬೆಟ್ಟದಲ್ಲಿ ನಡೆಯಬೇಕಾಗಿದ್ದ ಸಚಿವ ಸಂಪುಟ ಸಭೆ ದಿಢೀರ್ ರದ್ದಾಗಿದ್ದು, ಜುಲೈ 2 ರಂದು ನಡೆಸಲು ಸರ್ಕಾರ ನಿರ್ಧರಿಸಲಾಗಿದೆ.
ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರು ಮತ್ತು ಶಾಸಕರು ವಿಶೇಷ ಮನವಿಗಳನ್ನು ಮಾಡಿದ್ದರು. ಹೀಗಾಗಿ, ಈ ವ್ಯಾಪ್ತಿಯ ವಿಷಯಗಳನ್ನು ಬಿಟ್ಟು ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ.
ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ನಂದಿ ಬೆಟ್ಟದಲ್ಲಿ ಬರಪೂರ ಸಿದ್ದತೆ ಮಾಡಿಕೊಳ್ಳಲಾಗಿದೆ. ನಂದಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಕಟ್ಟಡಗಳ ನವೀಕರಣ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ.