ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿಂದು ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೃಷ್ಣ ಬೈರೇಗೌಡ, ಡಾ. ಎಂ.ಸಿ. ಸುಧಾಕರ್, ಬೈರತಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಎತ್ತಿನ ಹೊಳೆ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ. 2027ರ ಮಾರ್ಚ್ ವೇಳೆಗೆ ಕಾಮಗಾರಿ ಸಂಪೂರ್ಣಗೊಳಿಸಲು ಕಾಲಾವಧಿ ನಿಗದಿಪಡಿಸಲಾಗಿದೆ. .ಯೋಜನೆಯ ಬಯಲುಸೀಮೆಯ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಗುರಿ ಹೊಂದಿದೆ ಎಂದರು. ಯೋಜನೆಯ ಅನುಷ್ಠಾನಕ್ಕೆ ಇರುವ ತಾಂತ್ರಿಕ ಅಡಚಣೆಗಳನ್ನು ಶೀಘ್ರ ನಿವಾರಿಸಬೇಕು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.