ಬನ್ನಿ ಬನ್ನಿ, ವಿಧಾನಸೌಧ-ವಿಕಾಸಸೌಧಕ್ಕೆ ಕನ್ನಡತನ ಪ್ರತಿಬಿಂಬಿಸುವ ಒಂದು ಸಖತ್ ಸೂಪರ್ ಘೋಷವಾಕ್ಯ ಕೊಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧ ಮತ್ತು ವಿಕಾಸಸೌಧದ ಕಟ್ಟಡಗಳಿಗೆ ಕನ್ನಡತನ ಪ್ರತಿಬಿಂಬಿಸುವ ಘೋಷವಾಕ್ಯಗಳನ್ನು ಅಳವಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಯೋಜನೆ ರೂಪಿಸಿದ್ದು, ಸಾರ್ವಜನಿಕರಿಂದ ಘೋಷವಾಕ್ಯಗಳನ್ನು ಆಹ್ವಾನಿಸಿದೆ.

ಸಾರ್ವಜನಿಕರು ಕನ್ನಡ ಮತ್ತು ಕರ್ನಾಟಕದ ಕುರಿತಾದ ಘೋಷವಾಕ್ಯಗಳನ್ನು ಕಳುಹಿಸಬಹುದಾಗಿದೆ. ಸಾಹಿತ್ಯಿಕ ಘೋಷವಾಕ್ಯಗಳಲ್ಲದೆ, ಜನಪದದ ಸೂಕ್ತಿಗಳು, ಚಳವಳಿಗಳ ಘೋಷಣೆಗಳು, ಸಿನಿಮಾ ಗೀತೆಗಳನ್ನು ಸಹ ಅವಲೋಕಿಸಿ ಮೌಲ್ಯಯುತ ಸಲಹೆಗಳನ್ನು ನೀಡಬಹುದಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ನಿರಾಶಾದಾಯಕ ನುಡಿಗಳು, ವಿವಾದಾತ್ಮಕ ಹೇಳಿಕೆಗಳನ್ನು ಪರಿಗಣಿಸಲಾಗುವುದಿಲ್ಲ. ಗರಿಷ್ಠ ಎರಡು ಸಾಲುಗಳಲ್ಲಿ ಈ ಘೋಷವಾಕ್ಯಗಳು ಇರಬೇಕು. ರಚನೆಕಾರರ ಹೆಸರನ್ನು ಕಡ್ಡಾಯವಾಗಿ ನಮೂದಿಸಬೇಕು. [email protected] ಗೆ ಘೋಷವಾಕ್ಯ ಕಳುಹಿಸಬೇಕು. ಜೂನ್‌ 30 ಕೊನೆಯ ದಿನಾಂಕ. ಸಂಪರ್ಕ ಸಂಖ್ಯೆ ಮತ್ತು ವಿಳಾಸ ಕಡ್ಡಾಯವಾಗಿ ನಮೂದಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!