ಇಡೀ ವಿಶ್ವವನ್ನು ಒಂದು ಮಾಡಿರುವ ಶ್ರೇಯ ಯೋಗಕ್ಕೆ ಸಲ್ಲಬೇಕು: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಯೋಗ ಅಂದರೆ ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಯೋಗ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ‘1 ಭೂಮಿ, 1 ಆರೋಗ್ಯಕ್ಕಾಗಿ ಯೋಗ’ ಶೀರ್ಷಿಕೆಯಡಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದು ಯೋಗ ವಿಶ್ವಾದ್ಯಂತ ಒಂದು ಆಂದೋಲನವಾಗಿ ಮಾರ್ಪಟ್ಟಿದೆ ಎಂದು ಹೇಳಿದರು.

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್‌.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ. ಉದ್ದದ ಕಾರಿಡಾರ್​​​ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಏಕಕಾಲದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಯೋಗ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!