ವಿಶ್ವ ದಾಖಲೆಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ಮೋದಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಈ ಕಾರ್ಯಕ್ರಮ ವಿಶ್ವ ದಾಖಲೆಯ ಸ್ಥಾಪನೆಯತ್ತ ದಾಪುಗಾಲಿರಿಸಿದೆ.

11ನೇ ಅಂತರರಾಷ್ಟ್ರೀಯ ಯೋಗ ದಿನ ಸಾಗರದ ಕರಾವಳಿಯಲ್ಲಿರುವ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ ಸ್ವತಃ ಈ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

yoga for one health one earth ಎಂಬ ಥೀಮ್‌ನೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಆಂಧ್ರಪ್ರದೇಶ ಸರ್ಕಾರದ ಆಶ್ರಯದಲ್ಲಿ ಯೋಗ ಆಂಧ್ರ 2025 ಎಂಬ ಹೆಸರಿನಲ್ಲಿ ಆಯೋಜಿಸಲಾಗುತ್ತಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಸಚಿವ ನಾರಾ ಲೋಕೇಶ್, ಇತರ ಸಾರ್ವಜನಿಕ ಪ್ರತಿನಿಧಿಗಳು, ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸರ್ಕಾರಿ ನೌಕರರು, ಶಾಲಾ ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್ ಸ್ವಯಂಸೇವಕರು, ಯೋಗ ಸಂಘಗಳು, ನೌಕಾಪಡೆ, ಕೋಸ್ಟ್ ಗಾರ್ಡ್ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!