PHOTOS | ವಿಶಾಖಪಟ್ಟಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, 3 ಲಕ್ಷ ಜನರ ಯೋಗಾಭ್ಯಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಇತ್ತ ವಿಶಾಖಪಟ್ಟಣಂನಲ್ಲಿ ಅದ್ಧೂರಿಯಾಗಿ ಯೋಗ ದಿನಾಚರಣೆಗೆ ವೇದಿಕೆ ಸಜ್ಜು ಮಾಡಲಾಗಿತ್ತು. ಬೆಳಗ್ಗೆ 6.30ಕ್ಕೆ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನರೊಂದಿಗೆ ಯೋಗ ಮಾಡಿದ್ದಾರೆ. ಇದರ ಫೋಟೊಗಳು ಇಲ್ಲಿವೆ..

ವಿಶಾಖಪಟ್ಟಣಂನ ಆರ್‌.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವ್ಯವಸ್ಥೆ ಮಾಡಲಾಗಿತ್ತು.

ಯೋಗ ಕೇವಲ ವ್ಯಾಯಾಮವಲ್ಲ, ಅದು ಒಂದು ಜೀವನದ ಭಾಗ. ಪ್ರತಿಯೊಬ್ಬರು ಯೋಗ ಮಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ.

 

ಯೋಗ ಎಂದರೆ ಎಲ್ಲರೂ ಒಂದಾಗುವುದು. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ.
ಯೋಗ ಇಂದು ವಿಶ್ವವನ್ನೇ ಒಂದು ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ ಎಂದಿದ್ದಾರೆ ಪ್ರಧಾನಿ ಮೋದಿ.

 

ಡಿಸಿಎಂ ಪವನ್ ಕಲ್ಯಾಣ್ ಕೂಡ ಪ್ರಧಾನಿ ಮೋದಿ ಅವರೊಂದಿಗೆ ಯೋಗ ಮಾಡಿದರು. ಈ ವೇಳೆ ಮಾತನಾಡಿದ ಅವರು ಯೋಗದ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ ಎಂದು ಹೇಳಿದ್ದಾರೆ.

 

ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಕೂಡ ಯೋಗ ಮಾಡುವ ಮೂಲಕ ಯೋಗ ದಿನವನ್ನು ಆಚರಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ಅವರು ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!