ಹೊಸದಿಗಂತ ವರದಿ ರಾಯಚೂರು :
ಅಕ್ರಮ ಗಣಿಗಾರಿಕೆ ತನಿಖೆಗೆ ತಾರ್ಕಿಕ ಅಂತ್ಯ ಕಾಣಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆಯಲಾಗಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತು ಮುಖ್ಯಮಂತ್ರಿಗಳಿಗೆ 7 ಪುಟಗಳ ಪತ್ರ ಬರೆದಿದ್ದೇನೆ. ಅಕ್ರಮ ಗಣಿಗಾರಿಕೆ ಕುರಿತು ರಾಜ್ಯದಲ್ಲಿ 12 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಅದರಲ್ಲಿ ಕೇವಲ ಶೇ. 7 ತನಿಖೆಯಾಗುತ್ತಿವೆ ಎಂದಿದ್ದಾರೆ.
ರಾಜ್ಯದ, ನಮ್ಮ ಜನರ ಹಿತದೃಷ್ಟಿಯಿಂದ, ರಾಜ್ಯದ ಸೇವೆ ಆಗಬೇಕು, ನಮ್ಮ ಸರ್ಕಾರಕ್ಕೆ ಒಳ್ಳೆಯ ಹೆಸರು ಬೇಕು ಅನ್ನುವ ಕಾರಣಕ್ಕೆ ಪತ್ರ ಬರೆದಿದ್ದೇನೆ. ನಾನು ಬರೆದಿರುವ ಪತ್ರವನ್ನು ಈಗಾಗಲೇ ಮುಖ್ಯಮಂತ್ರಿಗಳಿಗೆ ತೋರಿಸಿದ್ದೇನೆ. ಅವರು ಪತ್ರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.