ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಮತ್ತೆ ಮುಂದುವರಿದಿದೆ. ರಾಜ್ಯದಲ್ಲಿ ಇತ್ತೀಚೆಗೆ ಕೆಲ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆಯುತ್ತಿರುವಂತಹ ಘಟನೆಗಳು ಹೆಚ್ಚಾಗುತ್ತಿವೆ.
ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವಂತಹ ಘಟನೆ ನಡೆದಿದೆ. ಹಾಲಿನ ಡೇರಿ ಅಧ್ಯಕ್ಷ ಮರಿಬಸವಯ್ಯ ಎಂಬುವರಿಗೆ ಹಸು ಸೇರಿತ್ತು.
ತನ್ನ ಜಮೀನಿನಲ್ಲಿ ಹಸು ಮೇಯಲು ಬಂದಿದೆ ಅನ್ನೋ ಕಾರಣಕ್ಕೆ ಹಳೆಯ ದ್ವೇಷದಿಂದ ಗುರುಸಿದ್ದಪ್ಪ ಅನ್ನೋರು ಸುವಿನ ಕೆಚ್ಚಲು ಕತ್ತರಿಸಿದ್ದಾರೆ ಅನ್ನೋ ಅನುಮಾನವಿದೆ. ಅವರೇ ಈ ಕೃತ್ಯವನ್ನ ಮಾಡಿರಬಹುದು ಎಂದು ಹಸುವಿನ ಮಾಲೀಕ ಮರಿ ಬಸವಯ್ಯ ಆರೋಪಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೇ ಹಸು ನಿನ್ನೆ ಜಮೀನಿನಲ್ಲೇ ಮೃತಪಟ್ಟಿದೆ.
ಈ ಹಿಂದೆ ಡೇರಿ ಅಧ್ಯಕ್ಷ ಚುನಾವಣೆ ವೇಳೆ ಮರಿಬಸವಯ್ಯ ಮತ್ತು ಗುರುಸಿದ್ದಪ್ಪ ನಡುವೆ ವೈಮನಸ್ಸು ಏರ್ಪಟ್ಟಿತು. ಹೀಗಾಗಿ ಗುರುಸಿದ್ದಪ್ಪ ವಿರುದ್ಧ ಹಸುವಿನ ಕೆಚ್ಚಲು ಕೊಯ್ದಿರುವ ಆರೋಪ ಮಾಡಲಾಗಿದೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಘಟನೆ ನಡೆದಿದೆ.