2025 ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್‌ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್‌ ನೇಮಕಗೊಂಡಿದ್ದಾರೆ.

ಭಾರತದ ಪ್ಯಾರಾಲಿಂಪಿಕ್ ಸಮಿತಿಯು, ನಟಿ ಮತ್ತು ರಾಜಕಾರಣಿ ಕಂಗನಾ ರಣಾವತ್‌ ಅವರನ್ನು 2025ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ಘೋಷಿಸಿದೆ.

ಕಂಗನಾ ಅವರು ಭಾರತದಲ್ಲಿ ಪ್ಯಾರಾ ಅಥ್ಲೆಟಿಕ್ಸ್‌ಗೆ ನವೀಕೃತ ಶಕ್ತಿ, ಗೋಚರತೆ ಮತ್ತು ಗಮನವನ್ನು ತರುವ ನಿರೀಕ್ಷೆ ನಮಗಿದೆ. ಕಂಗನಾ ಅವರ ಹೊಸ ಪಾತ್ರದಲ್ಲಿ, ಚಾಂಪಿಯನ್‌ಶಿಪ್‌ಗಳ ಮೂಲ ಮೌಲ್ಯಗಳನ್ನು ಉತ್ತೇಜಿಸುತ್ತಾರೆ ಎಂದು ಪಿಸಿಐ ತಿಳಿಸಿದೆ.

ಈ ಬಗ್ಗೆ ಕಂಗನಾ ರಣಾವತ್‌ ಅವರು ಸಮಾರಂಭದ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಪ್ಯಾರಾ ಅಥ್ಲೀಟ್‌ಗಳನ್ನು ಬೆಂಬಲಿಸಲು ಮತ್ತು ಅವರ ಅಸಾಧಾರಣ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ನನಗೆ ತುಂಬಾ ಗೌರವವಿದೆ. ನಮ್ಮ ಚಾಂಪಿಯನ್‌ಗಳ ಹಿಂದೆ ನಿಲ್ಲಲು ನನಗೆ ಹೆಮ್ಮೆ ಇದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!