February 4, 2026
Wednesday, February 4, 2026
spot_img

ವಿಪಕ್ಷಗಳ ಗದ್ದಲದಿಂದ ಸದನ ನಾಳೆಗೆ ಮುಂದೂಡಿಕೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ಮೋದಿ ಭಾಷಣ ಮಾಡಬೇಕಿತ್ತು. ಆದ್ರೆ ವಿರೋಧ ಪಕ್ಷಗಳ ಪ್ರತಿಭಟನೆಗಳು ಮತ್ತು ಗದ್ದಲದಿಂದಾಗಿ ಇಂದಿನ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಬಜೆಟ್ ಅಧಿವೇಶನದಲ್ಲಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ್ದಕ್ಕಾಗಿ ವಿರೋಧ ಪಕ್ಷದ ಸದಸ್ಯರು ಭಾರೀ ಘೋಷಣೆಗಳನ್ನು ಕೂಗಿದ ನಂತರ ಇಂದು ಲೋಕಸಭೆ ಕಲಾಪವನ್ನು ಮುಂದೂಡಲಾಗಿದ್ದು, ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ಕೂಡ ನಾಳೆಗೆ ಮುಂದೂಡಲ್ಪಟ್ಟಿದೆ.

ಇಂದು ಪ್ರಧಾನಿ ಮೋದಿ ಸಂಸತ್ತಿಗೆ ಆಗಮಿಸಿದ್ದರು. ಆದರೆ ಬಿಜೆಪಿ ಸಂಸದರಾದ ಪಿಪಿ ಚೌಧರಿ ಮಾತನಾಡುತ್ತಿದ್ದಂತೆ ಸದನವನ್ನು ನಾಳೆಗೆ ಮುಂದೂಡಲಾಯಿತು.

ಜನವರಿ 28ರಂದು ಬಜೆಟ್ ಅಧಿವೇಶನದ ಆರಂಭದಲ್ಲಿ ಎರಡೂ ಸದನಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !