ಚಿಕ್ಕಮಗಳೂರಿನಲ್ಲಿ ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಸಚಿವ ಕೆ.ಜೆ ಜಾರ್ಜ್‌ ಭೇಟಿ

ಹೊಸದಿಗಂತ ವರದಿ ಚಿಕ್ಕಮಗಳೂರು :

ಮಳೆಯಿಂದ ಮರ ಬಿದ್ದು ಸಾವಿಗೀಡಾದ ಎನ್.ಆರ್.ಪುರ ತಾಲ್ಲೂಕಿನ ಇಬ್ಬರ ಮನೆಗಳಿಗೆ ತೆರಳಿದ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಾಂತ್ವನ ಹೇಳಿದರಲ್ಲದೆ, ತಲಾ ೫ ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.

ಖಾಂಡ್ಯ ಹೋಬಳಿ ಬಿಳುಕೊಪ್ಪ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಮೃತಪಟ್ಟ ಅನಿಲ್ ಪಾಯಸ್ ಮನೆಗೆ ತೆರಳಿ ಪರಿಹಾರದ ಚೆಕ್ ವಿತರಿಸಿದರು.
ಅದೇ ತಾಲ್ಲೂಕಿನ ಕೊಗ್ರೆ ಬಳಿ ಆಟೋ ರಿಕ್ಷಾದ ಮೇಲೆ ಮರ ಬಿದ್ದು ಮೃತಪಟ್ಟ ಚಾಲಕ ರತ್ನಾಕರ ಮನೆಗೂ ತೆರಳಿ ಮೃತನ ಸಹೋದರನಿಗೆ ಪರಿಹಾರದ ಚೆಕ್ ವಿತರಿಸಿದರು.

ಮೃತರ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲಿ ಎನ್ನುವ ಕಾರಣಕ್ಕಾಗಿ ಪರಿಹಾರ ನೀಡಲಾಗುತ್ತಿದೆ. ಸಂತ್ರಸ್ತರ ಮನೆ ನಿರ್ಮಾಣ ಕಾರ್ಯವೂ ಪೂರ್ಣಗೊಂಡಿಲ್ಲ. ಅದನ್ನು ಶಾಸಕ ಟಿ.ಡಿ.ರಾಜೇಗೌಡ ಪೂರ್ಣಗೊಳಿಸಿಕೊಡುವುದಾಗಿ ತಿಳಿಸಿದ್ದಾರೆ. ಮೃತನ ಪುತ್ರಿಯ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿಯೂ ತಿಳಿಸಿದರು.

ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!