ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ದೇಶದ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ಬಾಂಬ್ ದಾಳಿಯನ್ನು ಇರಾನ್ನ ಪರಮಾಣು ಇಂಧನ ಸಂಸ್ಥೆ ದೃಢಪಡಿಸಿದೆ.
ನಮ್ಮ ಫೋರ್ಡೊ, ನಟಾಂಜ್ ಮತ್ತು ಎಸ್ಫಹಾನ್ ಪರಮಾಣು ಕೇಂದ್ರಗಳ ಮೇಲೆ ಶತ್ರುದೇಶ ದಾಳಿ ನಡೆಸಿದ್ದು, ಇದು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳಿಕೊಂಡಿದೆ. ಜೊತೆಗೆ ತನ್ನ ಪರಮಾಣು ಅಭಿವೃದ್ಧಿ ಕಾರ್ಯಕ್ರಮ ನಿಲ್ಲಿಸಲು ಸಾಧ್ಯವಿಲ್ಲವೆಂದೂ ಹೇಳಿದೆ.
ಅಮೆರಿಕ ಭೀಕರ ಬಾಂಬ್ ದಾಳಿ ನಡೆಸಿದ ಬೆನ್ನಲ್ಲೇ ಶಾಂತಿ ಮಾತುಕತೆಗೆ ವಿಶ್ವಸಂಸ್ಥೆ ಮನವಿ ಮಾಡಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಇರಾನ್ ಮೇಲೆ ಅಮೆರಿಕ ತೆಗೆದುಕೊಂಡ ಮಿಲಿಟರಿ ಕ್ರಮದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.