‘ಅಲ್ಪಸಂಖ್ಯಾತರಿಗೆ 15% ಮೀಸಲಾತಿ ವಿಚಾರ ಕೇಂದ್ರ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ವಿಚಾರ ಸದ್ಯ ಜಟಾಪಟಿಗೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ ಹೇಳಿಕೆ ನೀಡಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೀಸಲಾತಿ ಮಾಡುತ್ತಿದ್ದೇವೆ ಅಂತ ಹೇಳ್ತಿದ್ದಾರೆ. ಆದರೆ 2019ರಲ್ಲಿ ಕೇಂದ್ರ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಜಮೀರ್​ ಅಹ್ಮದ್ ಖಾನ್​ ಈ ಬಗ್ಗೆ ಮಾತನಾಡಿ, ಈ ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಮೈತ್ರಿ ಸರ್ಕಾರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ 15ರಷ್ಟು ಮೀಸಲಾತಿ ಬಗ್ಗೆ ಸಂಪುಟ ಉಪಸಮಿತಿ ಶಿಫಾರಸು ಮಾಡಲಾಗಿತ್ತು ಎಂದಿದ್ದರು. ಸದ್ಯ ಇದೇ ವಿಚಾರಕ್ಕೆ ಸಚಿವ ಪ್ರಲ್ಹಾದ್​ ಜೋಶಿ ತಿರುಗೇಟು ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!