ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಹೊಸ ದಾಖಲೆ ಬರೆಯೋಕೆ ಸಿದ್ಧವಾಗುತ್ತಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.
ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ ಸಾಗುತ್ತಿದ್ದು, ಈಗಾಗಲೇ ಕೆಆರ್‌ಎಸ್ ಡ್ಯಾಂ 119.40 ಅಡಿ ತುಂಬಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ.
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕನ್ನಂಬಾಡಿಯ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ 13,359 ಕ್ಯುಸೆಕ್ ಒಳಹರಿವಿದ್ದು, ಡ್ಯಾಂ ಭರ್ತಿಯಾಗುವ ಸಮಯದಲ್ಲಿ ಒಳಹರಿವು ಕಡಿಮೆಯಾಗಿದೆ.