ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಯುಮ್ನಮ್ ಖೇಮಚಂದ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಮಣಿಪುರದ ರಾಜ್ಯಪಾಲ ಅಜಯ್ ಭಲ್ಲಾ ಲೋಕ ಭವನದಲ್ಲಿ ಪ್ರಮಾಣ ವಚನ ಬೋಧಿಸಿದರು.
ಮೀತಿ ಮತ್ತು ಕುಕಿ ಸಮುದಾಯಗಳ ನಡುವೆ ಹೆಚ್ಚುತ್ತಿರುವ ಜನಾಂಗೀಯ ಹಿಂಸಾಚಾರದ ಮಧ್ಯೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಫೆಬ್ರವರಿ 13, 2025 ರಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿತ್ತು.



