ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಅಮೆರಿಕ ಇರಾನ್ನ ಅಣ್ವಸ್ತ್ರ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಹಲವು ರಾಷ್ಟ್ರಗಳು ಇರಾನ್ಗೆ ಅಣ್ವಸ್ತ್ರ ಬಲ ನೀಡಲು ಇದೀಗ ಮುಂದಾಗಿದೆ.
ರಷ್ಯಾ ಹಾಗೂ ಚೀನಾ, ಇರಾನ್ಗೆ ಬೆಂಬಲವನ್ನು ಘೋಷಿಸಿವೆ. ಇರಾನ್ಗೆ ಅಣ್ವಸ್ತ್ರ ಪೂರೈಸಲು ಹಲವು ದೇಶಗಳು ಮುಂದಾಗಿವೆ ಎಂದು ರಷ್ಯಾ ಅಧ್ಯಕ್ಷ ಪುಟಿನ್ ಆಪ್ತ ಡಿಮಿಟ್ರಿ ಮೆಡ್ಡೆಡೆವ್ ಹೇಳಿದ್ದಾರೆ.
ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ, ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಕಾನೂನುಗಳನ್ನು ಅಮೆರಿಕ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.